ಬೆಂಗಳೂರು: ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಲಾಕ್ಡೌನ್ ಜಾರಿ ಮಾಡಿದ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು, ಅಂತರ್ ಜಿಲ್ಲಾ ಸಂಚಾರ ನಿರ್ಬಂಧಿಸಿ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಲಾಕ್ ಡೌನ್ ಗೆ ಸರ್ಕಾರ ನಿರ್ಧಾರ ಮಾಡಿರುವ ಬೆನ್ನಲ್ಲೇ ಸರಕು ಸಾಗಣೆ ವಾಹನಗಳನ್ನು ಹೊರತುಪಡಿಸಿ ಅಂತರ್ ಜಿಲ್ಲಾ ಸಂಚಾರವನ್ನು ನಿರ್ಬಂಧಿಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕೊರೋನ ವೈರಸ್ ಸಮುದಾಯಕ್ಕೆ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಮನಗಂಡು ಇತರೆ ಗಂಭೀರ ಪರಿಸ್ಥಿತಿ ಇರುವ ಜಿಲ್ಲೆಗಳಲ್ಲಿಯೂ ಲಾಕ್ ಡೌನ್ ಮತ್ತೆ ಜಾರಿಗೊಳಿಸಿದರೆ ಸಾರ್ವಜನಿಕ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಬೆಂಬಲಿಸುವುದಾಗಿ ಹೇಳಿದ್ದಾರೆ.
Follow us on Social media