ಬೆಂಗಳೂರು: ಕೇಂದ್ರದ ಮಾರ್ಗಸೂಚಿಯಂತೆ ಸೋಮವಾರದಿಂದ ಲಾಕ್‌ಡೌನ್‌ನಲ್ಲಿ ಸಡಿಲಿಕೆ ಆಗುತ್ತಿದ್ದು, ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಸಂಚರಿಸುವವರಿಗಾಗಿ ಇ-ಪಾಸ್‌ಗಳನ್ನು ವಿತರಿಸಲಾಗುತ್ತಿದೆ.
ರಾಜ್ಯದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಈ ಕುರಿತು ಟ್ವೀಟ್ ಮಾಡಿ, ಒಂದು ಬಾರಿಗೆ ಅನ್ವಯವಾಗುವಂತೆ ಒನ್ ಡೇ, ಒನ್ ವೇ, ಒನ್ ಟೈಂ ಹೆಸರಿನಡಿ ಮಾನ್ಯತೆ ಪಡೆದ ಇ-ಪಾಸ್‌ಗಳನ್ನು ವಿತರಿಸಲಾಗುತ್ತಿದ್ದು, ಇದಕ್ಕಾಗಿ ಆನ್‌ಲೈನ್ ಲಿಂಕ್ ಸಂಪರ್ಕವನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ತಿಳಿಸಿದ್ದಾರೆ.
Follow us on Social media