ಬೆಂಗಳೂರು: ಪ್ರಯಾಣಿಕರ ಒತ್ತಡ ಮತ್ತು ನಷ್ಟ ಸರಿದೂಗಿಸುವ ಉದ್ದೇಶದಿಂದ ಇಂದಿನಿಂದ ಕೆ.ಎಸ್.ಆರ್.ಟಿ.ಸಿಯಿಂದ ರಾತ್ರಿ ಬಸ್ ಸೇವೆ ಆರಂಭಿಸಲಾಗಿದೆ.
ಬಸ್ ಗಳು ಎಂದಿನಂತೆ ಕಾರ್ಯಾಚರಣೆ ಮಾಡಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಕಟಣೆ ತಿಳಿಸಿದೆ.
ಕೊವಿಡ್-19 ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸೋಂಕು ನಿಯಂತ್ರಣದ ಜತೆಗೆ ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಿದೆ. ವ್ಯಕ್ತಿಗತ ಅಂತರ ಕಾಪಾಡಿ , ಸ್ಯಾನಿಟೈಸರ್ ಬಳಸಿ, ಮಾಸ್ಕ್ ಧರಿಸಿದವರಿಗೆ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.
ಹೀಗಾಗಿ ಸಾರಿಗೆ ಬಸ್ಸುಗಳಲ್ಲಿನ ಪ್ರಯಾಣ ಸುರಕ್ಷತೆಯಿಂದ ಕೂಡಿದ್ದು, ಸೋಂಕು ನಿಯಂತ್ರಣ ಕ್ರಮಗಳು ಮುಂದುವರೆಯುತ್ತಿವೆ. “ಪ್ರಯಾಣಿಕರ ಸುರಕ್ಷತೆ ನಮ್ಮ ಪ್ರಥಮ ಆದ್ಯತೆ” ಎಂದು ಹೇಳಿದೆ.
Follow us on Social media