ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಯ ನೂತನ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಗುರುವಾರ ಅಧಿಕಾರ ಸ್ವೀಕರಿಸಲಿದ್ದು ಪಕ್ಷದ ನೂತನ ಕಟ್ಟಡದಲ್ಲಿ ಪದಗ್ರಹಣ ಕಾರ್ಯಕ್ರಮಕ್ಕೆ ನಡೆಯಲಿದೆ.
ಬೆಳಿಗ್ಗೆ 10.30ಕ್ಕೆ ಸೇವಾದಳ ಕಾರ್ಯಕರ್ತರ ಗೌರವ ರಕ್ಷೆಯೊಂದಿಗೆ ಪ್ರಾರಂಭವಾಗಲಿರುವ ಈ ಕಾರ್ಯಕ್ರಮದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿವಕುಮಾರ್, “ಈಗಾಗಲೇ ಪದಗ್ರಹಣ ಕಾರ್ಯಕ್ರಮಕ್ಕೆ ಸಿಎಂ ಅನುಮತಿ ನೀಡಿದ್ದಾರೆ. ಈ ಕಾರ್ಯಕ್ರಮ ಸುದ್ದಿ ಮಾಧ್ಯಮಗಳು ಹಾಗೂ ಜೂಮ್ ಆಪ್ ಮೂಲಕ ನೇರ ಪ್ರಸಾರವಾಗಲಿದೆ. ಆಹ್ವಾನವಿದ್ದವರು ಮಾತ್ರ ಆಗಮಿಸಬೇಕು. ಉಳಿದ ಕಾರ್ಯಕರ್ತರು ಜೂಮ್ ಆಪ್ ಹಾಗೂ ಸುದ್ದಿ ಮಾಧ್ಯಮಗಳ ಮೂಲಕ ವೀಕ್ಷಿಸಬೇಕು” ಎಂದು ತಿಳಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಕೇರಳದ ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿತ್ತಲ, ಕೇರಳ ಕಾಂಗ್ರೆಸ್ ಘಟಕದ ಅಧ್ಯಕ್ಷ ಮುಲ್ಲಪಳ್ಳಿ ರಾಮಚಂದ್ರನ್ ಹಾಗೂ ರಾಜ್ಯ ನಾಯಕರು ಸೇರಿ 150 ಪ್ರಮುಖರನ್ನು ಆಹ್ವಾನಿಸಲಾಗಿದೆ.
Follow us on Social media