ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ಹಿನ್ನೆಲೆಯಲ್ಲಿ ಈ ವರ್ಷ ಸರಳವಾಗಿ ಮೈಸೂರು ದಸರಾ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಮೈಸೂರು ದಸರಾ ಆಚರಣೆ ಸಂಬಂಧ ಚರ್ಚೆ ನಡೆಸುತ್ತಿದ್ದೇನೆ. ಸರಳ ರೀತಿಯಲ್ಲಿ ಹೇಗೆ ಆಚರಿಸಬಹುದು ಎಂಬುದನ್ನು ನೋಡುತ್ತಿರುವುದಾಗಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಈ ಬಾರಿ ಕೋವಿಡ್- 19 ಹಿನ್ನೆಲೆಯಲ್ಲಿ ಬೃಹತ್ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆಯನ್ನು ರದ್ದುಪಡಿಸಲಾಗುತ್ತಿದೆ ಎಂಬ ವರದಿಗಳ ಬೆನ್ನಲ್ಲೇ ಮುಖ್ಯಮಂತ್ರಿ ಈ ರೀತಿಯ ಹೇಳಿಕೆ ನೀಡಿದ್ದಾರೆ.
ಪ್ರತಿವರ್ಷ ಹತ್ತು ದಿನಗಳ ಕಾಲ ನಾಡಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಈ ವರ್ಷ ಅಕ್ಟೋಬರ್ 17ರಿಂದ 26ರವರೆಗೂ
ದಸರಾ ಆಚರಣೆ ನಡೆಯುವ ಸಾಧ್ಯತೆಯಿದೆ.