ಬೆಂಗಳೂರು: ರಾಜರಾಜೇಶ್ವರಿ ಉಪಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದ್ದಂತೆಯೇ ಮುನಿರತ್ನ ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶನಿವಾರ ಭರವಸೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಕೂಡಲೇ ಮುನಿರತ್ನ ಅವರಿಗೆ ನೂರಕ್ಕೆ ನೂರರಷ್ಟು ಸಚಿವ ಸ್ಥಾನವನ್ನು ನೀಡುತ್ತೇನೆ. ನಾವು ಯಾವುದೇ ಜಾತಿ ರಾಜಕಾರಣವನ್ನು ಮಾಡುತ್ತಿಲ್ಲ. ನಮ್ಮ ಸಂಪುಟದಲ್ಲಿ ಈಗಾಗಲೇ ಒಕ್ಕಲಿಗ ಸಚಿವರು ಇದ್ದಾರೆ. ಎಲ್ಲಾ ಸಮುದಾಯವನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆಂದು ಹೇಳಿದ್ದಾರೆ.
ಉಪಚುನಾವಣೆ ಪೂರ್ಣಗೊಂಡ ಕೂಡಲೇ ದೆಹಲಿ ಹೋಗುತ್ತೇನೆ. ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾರಚನೆಯ ಬಗ್ಗೆ ದೆಹಲಿಗೆ ಹೋದ ಬಳಿಕ ಅಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಸಚಿವ ಸಂಪುಟ ಈಗಾಗಲೇ ವಿಸ್ತರಣೆ ಮಾಡಬೇಕಿತ್ತು. ಬೇರೆ ಬೇರೆ ಕಾರಣಗಳಿಂದಾಗಿ ವಿಸ್ತರಣೆ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಉಪಚುನಾವಣೆ ಪೂರ್ಣಗೊಳ್ಳುತ್ತಿದ್ದಂತೆಯೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
Follow us on Social media