ಉಳ್ಳಾಲ: ಇಲ್ಲಿನ ಠಾಣಾ ವ್ಯಾಪ್ತಿಯ ಬಗಂಬಿಲ ಎಂಬಲ್ಲಿ ಕಾಲೇಜು ವಿದ್ಯಾರ್ಥಿಯೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿರುವ ಘಟನೆ ನಿನ್ನೆ ಸಂಜೆ ನಡೆದಿದೆ.
ಕುಂಪಲದ ಬಗಂಬಿಲ ನಿವಾಸಿ, ಮಂಗಳೂರು ಖಾಸಗಿ ಕಾಲೇಜಿನ ದ್ವಿತೀಯ ಬಿಬಿಎ ವಿದ್ಯಾರ್ಥಿ ಹರ್ದೀಪ್ (20) ಮೃತ ವಿದ್ಯಾರ್ಥಿ. ಈತ ಗುರುವಾರ ಬಗಂಬಿಲದ ಮನೆಗೆ ಬಂದಿದ್ದು, ಮನೆಯಲ್ಲಿ ತಾಯಿ ಮತ್ತು ಮಗ ವಾಸವಾಗಿದ್ದರು.
ತಾಯಿಗೆ ತುಂಬಾ ಸಾಲ ಇರುವ ಬಗ್ಗೆ ಅರಿತ ವಿದ್ಯಾರ್ಥಿ ಹರ್ಷದೀಪ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow us on Social media