ಬೆಂಗಳೂರು: ಮಾಜಿ ರಾಷ್ಟ್ರಪತಿ, ಮಿಸೈಲ್ ಮ್ಯಾನ್ ಎಂದೇ ಖ್ಯಾತರಾಗಿದ್ದ ಎಪಿಜೆ ಅಬ್ದುಲ್ ಕಲಾಂ ಅವರ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿ ಹಲವು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ಭಾರತದ ’ಮಿಸೈಲ್ ಮ್ಯಾನ್’, ದೇಶದ 11ನೇ ರಾಷ್ಟ್ರಪತಿಗಳಾಗಿದ್ದ ಭಾರತರತ್ನ ಎ.ಪಿ.ಜಿ. ಅಬ್ದುಲ್ ಕಲಾಂ ಅವರ ಪುಣ್ಯತಿಥಿಯಂದು ಅವರನ್ನು ಸ್ಮರಿಸೋಣ. ಅವರ ಬದುಕು, ಸಾಧನೆ, ವ್ಯಕ್ತಿತ್ವಗಳು ಆದರ್ಶಪ್ರಾಯವಾಗಿದ್ದು, ಕೋಟ್ಯಂತರ ಜನರಿಗೆ ನಿರಂತರ ಸ್ಫೂರ್ತಿ ನೀಡುತ್ತಿವೆ ಎಂದು ತಿಳಿಸಿದ್ದಾರೆ.
ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಟ್ವೀಟ್ ಮಾಡಿ, ದೇಶದ ಹೆಮ್ಮೆಯ ಮಿಸೈಲ್ ಮ್ಯಾನ್ ಎಂದೇ ಖ್ಯಾತರಾಗಿದ್ದ ಎ ಪಿ ಜೆ ಅಬ್ದುಲ್ ಕಲಾಂ ಅವರ ಪುಣ್ಯ ತಿಥಿಯಂದು ಸ್ಮರಿಸುತ್ತಾ. ವಿಶ್ವ ಕಂಡ ಶ್ರೇಷ್ಠ ವಿಜ್ಞಾನಿ, ದೇಶದ ರಾಷ್ಟ್ರಪತಿಗಳಾಗಿ ಭಾರತ ಮಾತೆಯ ಸೇವೆ ಸಲ್ಲಿಸಿದ ನಿಮಗೆ ಅನಂತ ಕೋಟಿ ನಮನಗಳು ಎಂದು ತಿಳಿಸಿದ್ದಾರೆ.
Follow us on Social media