ಪಶ್ಚಿಮ ಬಂಗಾಳ: ಅನಾರೋಗ್ಯಕ್ಕೆ ಒಳಗಾಗಿದ್ದ, ಬೆಂಗಾಲಿಯ ಸಾಕಷ್ಟು ಸೀರಿಯಲ್ ಮೂಲಕ ಮೋಡಿ ಮಾಡಿದ್ದ ಐಂದ್ರಿಲಾ ಶರ್ಮಾ (24) ಅವರು ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.ಹೃದಯಾಘಾತಕ್ಕೊಳಗಾಗಿದ್ದ ಇವರನ್ನು ನಿನ್ನೆ ರಾತ್ರಿ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು (ನ.20) ಮಧ್ಯಾಹ್ನ ನಿಧನರಾಗಿದ್ದಾರೆ.
ಸ್ತನ ಕ್ಯಾನ್ಸರ್ ರೋಗಕ್ಕೆ ಒಳಗಾಗಿದ್ದ ನಟಿ ಐಂದ್ರಿಲಾ ಕ್ಯಾನ್ಸರ್ ಗೆದ್ದು ಮತ್ತೆ ಬಣ್ಣ ಹಚ್ಚಲು ರೆಡಿಯಾಗಿದ್ದರು. ಆದರೆ ದುರಾದೃಷ್ಟವಶಾತ್ ಕ್ಯಾನ್ಸರ್ನಿಂದ ಗುಣಮುಖರಾಗುತ್ತಿದ್ದಂತೆ ಐಂದ್ರಿಲಾ ಬ್ರೈನ್ ಸ್ಟ್ರೋಕ್ಗೆ ಒಳಗಾದರು. ಮತ್ತೆ ಐಂದ್ರಿಲಾ ಆಸ್ಪತ್ರೆಗೆ ದಾಖಲಾದರು.
ಎರಡೂ ಕಾಯಿಲೆಯಿಂದ ಸುಧಾರಿಸಿಕೊಂಡಿದ್ದ ಐಂದ್ರಿಲಾ ಇದೀಗ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಐಂದ್ರಿಲಾ ನಿಧನಕ್ಕೆ ಅವರ ಆಪ್ತರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.