ದುಬೈ: ಐಪಿಎಲ್ 2020 ಟೂರ್ನಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ವಿಕೆಟ್ ಗಳಿಂದ ಗೆಲುವು ಸಾಧಿಸುವ ಮೂಲಕ ಐದನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಐಪಿಎಲ್ ಟೂರ್ನಿಯಲ್ಲಿ ಮೊದಲ ಬಾರಿಗೆ ಫೈನಲ್ ಹಂತಕ್ಕೆ ತಲುಪಿದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬ್ಯಾಟಿಂಗ್ ಮಾಡಿದ್ದು ನಿಗದಿತ ಓವರ್ ನಲ್ಲಿ 7 ವಿಕೆಟ್ ಕಳೆದುಕೊಂಡು 156 ರನ್ ಪೇರಿಸಿತ್ತು. ಸಾಧಾರಣ ಮೊತ್ತ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ಇನ್ನು 8 ಎಸೆತಗಳು ಇರುವಂತೆ 5 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.
ಮುಂಬೈ ಇಂಡಿಯನ್ಸ್ ಪರ ನಾಯಕ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ಮಾಡಿ 68 ರನ್ ಪೇರಿಸಿದ್ದಾರೆ. ಡಿ ಕಾಕ್ 20, ಸೂರ್ಯ ಯಾದವ್ 19 ಮತ್ತು ಇಶಾನ್ ಕಿಶನ್ ಅಜೇಯ 33 ರನ್ ಬಾರಿಸಿದ್ದಾರೆ.
ಮುಂಬೈ ಇಂಡಿಯನ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿದ ವರ್ಷಗಳು
* ಇಂಡಿಯನ್ಸ್ ಮೊದಲ ಬಾರಿಗೆ 2013ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.
* 2015ರಲ್ಲಿ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು.
* 2017ರಲ್ಲಿ ಮತ್ತೆ ಚಾಂಪಿಯನ್ ಆದ ಮುಂಬೈ.
* 2019ರಲ್ಲಿ ನಾಲ್ಕನೇ ಬಾರಿಗೆ ಚಾಂಪಿಯನ್ ಆದ ಮುಂಬೈ.
* ಪ್ರಸಕ್ತ ವರ್ಷ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಐದನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಮೊದಲ ತಂಡ ಎಂಬ ಖ್ಯಾತಿಗೆ ಭಾಜನವಾಗಿದೆ.
Follow us on Social media