Breaking News

ಕರ್ನಾಟಕಕ್ಕೆ ಕೊರೋನಾಘಾತ: ಒಂದೇ ದಿನ 115 ಸಾವು, ಬೆಂಗಳೂರಿನಲ್ಲಿ 2,208 ಸೇರಿ 3,693 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ ಬರೋಬ್ಬರಿ 115 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,147ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 75 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 115 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2,208 ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 3,693 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 55,115ಕ್ಕೇರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 1,028 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 33,205 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×