ಬೆಂಗಳೂರು: ಮಹಾರಾಷ್ಟ್ರದಿಂದ ಬರುತ್ತಿರುವವರಿಂದ ಕರ್ನಾಟಕದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಎಚ್ಚೇತ ರಾಜ್ಯ ಸರ್ಕಾರ ಇದೀಗ ಅಲ್ಲಿಂದ ಬರುವವರಿಗಾಗಿ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ.
ಮಹಾರಾಷ್ಟ್ರದಿಂದ ಬರುವವರಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇರುವ ಅವಶ್ಯಕತೆ ಇಲ್ಲ. ಬದಲಿಗೆ 14 ದಿನಗಳ ಹೋಂ ಕ್ವಾರಂಟೈನ್ ಮಾಡಲು ಸೂಚನೆ ನೀಡಲಾಗಿದೆ.
ಹೊರ ರಾಜ್ಯಗಳಿಂದ ಬರುವವರಿಗೆ ರಾಜ್ಯದ ಚೆಕ್ ಪೋಸ್ಟ್ ನಲ್ಲಿ ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯ. ಜ್ವರದ ಯಾವುದೇ ಲಕ್ಷಣಗಳು ಇಲ್ಲವಾದಲ್ಲಿ ಕೈಗೆ ಹೋ ಕ್ವಾರಂಟೈನ್ ಸೀಲ್ ಹಾಕಿ ಮನೆಗೆ ಕಳಿಸಲಾಗುತ್ತದೆ. ಲಕ್ಷಣಗಳು ಇದ್ದರೆ ಕೋವಿಡ್ 19 ಪರೀಕ್ಷೆಗಾಗಿ ಆಸ್ಪತ್ರೆಗೆ ಹೋಗಬೇಕು.
ಇನ್ನು ಮಹಾರಾಷ್ಟ್ರ ಸೇರಿದಂತೆ ಇತರ ರಾಜ್ಯಗಳಿಂದ ಸಾಕಷ್ಟು ಮಂದಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ಪೈಕಿ ಅತೀ ಹೆಚ್ಚು ಸೋಂಕುಗಳು ಪತ್ತೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
Follow us on Social media