ಬೆಂಗಳೂರು : ಕರ್ನಾಟಕದ ಕೊರೋನಾವೈರಸ್ ಸೋಂಕಿತರ ಸಂಖ್ಯೆ ಶುಕ್ರವಾರ ಮಧ್ಯಾಹ್ನ ಸಾವಿರದ ಗಡಿ ದಾಟಿದೆ. ಗುರುವಾರ ಸಂಜೆಯಿಂದ ಶುಕ್ರವಾರ ಮಧ್ಯಾಹ್ನದ ನಡುವೆ ಬೆಂಗಳೂರಿನಲ್ಲಿ 13 ಸೇರಿದಂತೆ ರಾಜ್ಯದಲ್ಲಿ ಒಟ್ಟು 45 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ. ಇದರೊಡನೆ ರಾಜ್ಯದ ಒಟ್ಟಾರೆ ಸೋಂಕಿತರ ಸಂಖ್ಯೆ 1032ಕ್ಕೆ ತಲುಪಿದೆ.
ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲಿ 16 ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ನಗರದಲ್ಲಿ 13, ಬೀದರ್ ನಲ್ಲಿ 3, ಕೋಲಾರದಲ್ಲಿ 1, ಚಿತ್ರದುರ್ಗದಲ್ಲಿ 2, ಶಿವಮೊಗ್ಗದಲ್ಲಿ 1, ಹಾಸನದಲ್ಲಿ 3, ಬಾಗಲಕೋಟೆಯಲ್ಲಿ 1, ಉಡುಪಿಯಲ್ಲಿ 5 ಪ್ರಕರಣಗಳು ಪತ್ತೆಯಾಗಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುಬೈನಿಂದ ಮರಳಿರುವ ವ್ಯಕ್ತಿಗಳಲ್ಲಿ ಸೋಂಕು ಪತ್ತೆಯಾಗಿದೆ. ಚಿತ್ರದುರ್ಗ, ಶಿವಮೊಗ್ಗ, ಹಾಸನದಲ್ಲಿ ಮುಂಬೈನಿಂದ ಮರಳಿದ ವ್ಯಕ್ತಿಗಳಲ್ಲಿ ಸೋಂಕು ದೃಢಪಟ್ಟಿದೆ. ಕೋಲಾರ ಮತ್ತು ಚಿತ್ರದುರ್ಗದಲ್ಲಿ ಚೆನ್ನೈನಿಂದ ಮರಳಿದ ಹಾಗೂ ಉಡುಪಿಗೆ ದುಬೈನಿಂದ ಮರಳಿದ ವ್ಯಕ್ತಿಗಳಲ್ಲಿ ಸೋಂಕು ಕಂಡುಬಂದಿದೆ. ಇತರ ಜಿಲ್ಲೆಗಳಲ್ಲಿ ಸೋಂಕಿತರ ಸಂಪರ್ಕಕ್ಕೆ ಬಂದರಲ್ಲಿ ಕೂಡ ಸೋಂಕು ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 68 ವರ್ಷದ ಮಹಿಳೆಗೆ ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರಲ್ಲಿ ಕೂಡ ಸೋಂಕು ಕಂಡುಬಂದಿದೆ.
ರಾಜ್ಯದಲ್ಲಿ ಒಟ್ಟು 520 ಪ್ರಕರಣಗಳು ಸಕ್ರಿಯವಾಗಿದ್ದು, 476 ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಲ್ಲಿಯವರೆಗೆ 36 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
Follow us on Social media