Breaking News

ಕರ್ನಾಟಕ ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ರಿಜಿಸ್ಟ್ರೇಷನ್ ನಂಬರ್​ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಿ, ಫಲಿತಾಂಶವನ್ನು ವೀಕ್ಷಿಸಬಹುದು.

ಕರ್ನಾಟಕದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಲಾಕ್​ಡೌನ್​ ಹಿನ್ನೆಲೆ ಸುವಿದ್ಯಾ ವೆಬ್​ಸೈಟ್​ನಲ್ಲಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಪ್ರಥಮ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು SuVidya ವೆಬ್​ಸೈಟ್​ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. ಹಾಗೆಯೇ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್​ ನಂಬರ್​ಗಳಿಗೆ ಕೂಡ ಫಲಿತಾಂಶವನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಶಾಲೆಗಳಲ್ಲಿ ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು ಗುಂಪು ಸೇರುವ ಸಾಧ್ಯತೆ ಇರುವುದರಿಂದ ಸುವಿದ್ಯಾ ವೆಬ್​ ಪೋರ್ಟಲ್​ನಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಫಲಿತಾಂಶ ಪಡೆಯುವುದು ಹೇಗೆ?
ಸುವಿದ್ಯಾ ವೆಬ್​ಸೈಟ್​​ನಲ್ಲಿ  ವಿದ್ಯಾರ್ಥಿಗಳು ತಮ್ಮ ರಿಜಿಸ್ಟ್ರೇಷನ್ ನಂಬರ್​ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಿ, ಫಲಿತಾಂಶವನ್ನು ವೀಕ್ಷಿಸಬಹುದು. 

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×