ಕಲಬುರಗಿ : ಕಾರು ಮತ್ತು ಕ್ರೂಸರ್ ನಡುವೆ ಡಿಕ್ಕಿಯಾದ ಪರಿಣಾಮ ತೆಲಂಗಾಣ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಕೆಲವರು ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಭೀಮನಾಳದಲ್ಲಿ ನಡೆದಿದೆ.
ಮೃತರನ್ನು ತೆಲಂಗಾಣದ ಹನುಮಕೊಂಡಾ ನಗರದ ಉಜಲಿಬೇಸ ನಿವಾಸಿ ಮಹಮ್ಮದ್ ಅಬ್ದುಲ್ ಮಜೀದ ಸಿದ್ಧಿಖಿ (71), ಹೈದರಾಬಾದ್ನ ಬಾಲಾಜಿ ನಗರದ ಸಾದಯಾ ಖುನ್ನಿಸಾ ಬೇಗಂ (55) ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow us on Social media