ಕಾರವಾರ : ಯಲ್ಲಾಪುರ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆಯ ಮೇಲೆ ಅಪರಿಚಿತರು ಕಾರು ಚಲಾಯಿಸಿಕೊಂಡು ಬಂದಿದದ್ದು ಇದಕ್ಕೆ ಸ್ಥಳೀಯರು ವಿರೋಧಿಸಿದಾಗ ಕಾರಿನಲ್ಲಿದ್ದವರು ಅನುಚಿತವಾಗಿ ವರ್ತಿಸಿ, ದರ್ಪ ತೋರಿದ್ದಾರೆ ಎಂದು ಆರೋಪಿಸಿದ್ದಾರೆ.
- ಸೇತುವೆಯಲ್ಲಿ ಸಾಗಿ ಬಂದ ಕಾರನ್ನು ಸ್ಥಳೀಯರು ತಡೆದು ರಿವರ್ಸ್ ಗೇರ್‌ನಲ್ಲಿ ಹಿಮ್ದಕ್ಕೆ ಕಳುಹಿಸಿ, ಕಾರು ಚಲಾಯಿಸಿ ಸೇತುವೆಗೆ ಹಾನಿಯಾಗಿ ಅಪಾಯವಾದರೆ ಯಾರು ಹೊಣೆಯಾಗುತ್ತಾರೆ ಎಂದು ಪ್ರವಾಸಿಗರು, ಸ್ಥಳೀಯರು ಪ್ರಶ್ನಿಸಿದ್ದಾರೆ.ಇನ್ನು ಪ್ರವಾಸ ಬಂದ ಕೆಲವರು ಸೇತುವೆಯ ಮೇಲೆ ಇಕ್ಕಟ್ಟಾದ ಜಾಗದಲ್ಲಿ ಕಾರು ಚಲಾಯಿಸಿಕೊಂಡು ಬರುತ್ತಾರೆ. ಕಾರು ಬಂದಾಗ ಸೇತುವೆಯಲ್ಲಿ ನಡೆದುಕೊಂಡು ಹೋಗಲು ಕೂಡ ಜಾಗವಿರುವುದಿಲ್ಲ. ಹಾಗಾಗಿ ಅಂಥವರ ವಿರುದ್ಧ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.