ಬೆಂಗಳೂರು: ಕಾರಿನಲ್ಲಿ ಅಥವಾ ಬೈಕ್ನಲ್ಲಿ ಒಬ್ಬರೇ ಇದ್ದೇವೆ ಎಂದು ಮಾಸ್ಕ್ ಧರಿಸದೆ ಸಂಚರಿಸುವಂತಿಲ್ಲ. ಒಬ್ಬರೇ ಇದ್ದರೂ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಲೇಬೇಕೆಂದು ಬಿಬಿಎಂಪಿ ಆದೇಶ ಹೊರಡಿಸಿದೆ.
ಕಾರಿನಲ್ಲಿ ಒಬ್ಬರೇ ಇದ್ದೇವೆಂದು ಮೈಮರೆತು ಕುಳಿತರೆ ದಂಡ ಬೀಳುವುದು ಪಕ್ಕಾ. ಬೈಕಿನಲ್ಲಿ ಸಹ ಒಬ್ಬರೇ ಇದ್ದೇವೆ ಎಂದು ಮಾಸ್ಕ್ ಧರಿಸದಿದ್ದರೆ ದಂಡ ಕಟ್ಟಬೇಕಾಗುತ್ತದೆ. ಮಾಸ್ಕ್ ಧರಿಸುವ ಕುರಿತು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಸ್ಪಷ್ಟ ಆದೇಶ ಹೊರಡಿಸಿದ್ದು, ತಿನ್ನುವಾಗ, ಕುಡಿಯುವಾಗ, ಈಜುವಾಗ ಮಾತ್ರ ಮಾಸ್ಕ್ ಧರಿಸುವುದರಿಂದ ವಿನಾಯಿತಿ ನೀಡಲಾಗಿದೆ. ಒಬ್ಬರಿಗಿಂತ ಹೆಚ್ಚು ಜನ ನಿಂತು ಮಾತನಾಡುವಾಗ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಅವರು ತಿಳಿಸಿದ್ದಾರೆ.
ಕೊರೊನಾ ನಿಯಂತ್ರಣಕ್ಕಾಗಿ ಮಾಸ್ಕ್ ಧಾರಣೆ ಬಗ್ಗೆ ಜಾಗೃತಿ ಮೂಡಿಸಲು ವಾರ್ಡ್ ವಾರು, ವಲಯವಾರು ಸಮಿತಿ ರಚಿಸಲು ಆದೇಶಿಸಲಾಗಿದೆ. ಈ ಮೂಲಕ ಮಾಸ್ಕ್ ಹಾಗೂ ಸಾಮಜಿಕ ಅಂತರ ಸೇರಿದಂತೆ ಕೊರೊನಾ ನಿಯಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸೂಚಿಸಲಾಗಿದೆ.
Follow us on Social media