ಬೆಂಗಳೂರು: ರಾಜ್ಯದ ಪ್ರಮುಖ ರಾಜಕೀಯ ನಾಯಕರು ಒಬ್ಬೊಬ್ಬರೇ ಕೊರೋನಾ ದಾಳಿಗೆ ಸಿಲುಕುತ್ತಿದ್ದು, ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ.
ಕೊಳೆದ ನಾಲ್ಕು ದಿನಗಳಿಂದ ಜ್ವರ ಹಾಗೂ ಬೆನ್ನು ನೋವಿನಿಂದ ಬಳಲುತ್ತಿದ್ದ ಡಿಕೆ ಶಿವಕುಮಾರ್ ಅವರು ಎರಡು ದಿನಗಳ ಹಿಂದೆ ಕೊವಿಡ್-19 ಟೆಸ್ಟ್ ಮಾಡಿಸಿದ್ದರು. ಇಂದು ವರದಿ ಬಂದಿದ್ದು, ಪಾಸಿಟಿವ್ ದೃಢಪಟ್ಟಿದೆ.
ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರು ಇಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಇತ್ತೀಚಿಗಷ್ಟೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಇದೀಗ ಡಿಕೆ ಶಿವಕುಮಾರ್ ಅವರಿಗೆ ವಕ್ಕರಿಸಿದೆ.
Follow us on Social media