ಗಂಗಾವತಿ: ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಹೇಮಗುಡ್ಡ ಗ್ರಾಮದ ಬಳಿ ಇಂದು ನಡೆದಿದೆ.
ಹೇಮಗುಡ್ಡ ಗ್ರಾಮದ ಹೊರವಲಯದ ಗಿಣಿಗೇರಾ- ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಆಗಷ್ಟೇ ಬೇಟೆಯಾಡಿ ಆಹಾರವನ್ನು ಬಾಯಲ್ಲಿ ಕಚ್ಚಿಕೊಂಡು ರಸ್ತೆ ದಾಟುತ್ತಿದ್ದ ಚಿರತೆಗೆ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಒಂದು ವರ್ಷ ಪ್ರಾಯದ ಹೆಣ್ಣು ಚಿರತೆ ಸ್ಥಳದಲ್ಲಿಯೇ ಮೃತಪಟ್ಟಿದೆ.
ರಸ್ತೆ ಬದಿಯಲ್ಲಿ ಒದ್ದಾಡುತ್ತಿದ್ದ ಚಿರತೆಯನ್ನು ಗಮನಿಸಿದ ಸ್ಥಳೀಯ ಕೆಲ ಯುವಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿ ರಾಮಣ್ಣ, ಚಿರತೆ ಕಳೇಬರವನ್ನು ಮರಣೋತ್ತರ ಪರೀಕ್ಷೆಗಾಗಿ ಪಶು ಆಸ್ಪತ್ರೆಗೆ ರವಾನಿಸಲಾಗಿದ್ದು, ವೈದ್ಯಕೀಯ ಪರೀಕ್ಷೆ ಬಳಿಕ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ತಿಳಿಸಿದ್ದಾರೆ.
Follow us on Social media