ಬೆಂಗಳೂರು: ಕೊರೋನಾ ವಿರುದ್ಧ ಹೋರಾಡಲು ಸಲಕರಣೆಗಳು, ಪಿಪಿಇ ಕಿಟ್ ಗಳ ಖರೀದಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಸಾಮಾಜಿಕ ತಾಣದಲ್ಲಿ “ಲೆಕ್ಕ ಕೊಡಿ” ಅಭಿಯಾನ ಪ್ರಾರಂಭಿಸಿದ್ದಾರೆ.
ಕೋವಿಡ್-19 ನಿಯಂತ್ರಣಕ್ಕಾಗಿ ಖರ್ಚು ಮಾಡಿದ ಹಣದ ಲೆಕ್ಕ ಕೊಡುವಂತೆ ಸಿದ್ದರಾಮಯ್ಯ ಯಡಿಯೂರಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ವೀಡಿಯೋ ಸಂದೇಶ ನೀಡಿರುವ ಅವರು “ಕೊರೊನಾ ನಿಯಂತ್ರಣದ ಉದ್ದೇಶಕ್ಕಾಗಿ ಖರ್ಚು ಮಾಡಿದ ಹಣದ ಲೆಕ್ಕ ಕೊಡಿ. ಲೆಕ್ಕ ಕೇಳುವುದು ರಾಜ್ಯದ ಜನತೆಯ ಹಕ್ಕು!! ಲೆಕ್ಕ ಕೊಡುವುದು ನಿಮ್ಮ ಕರ್ತವ್ಯ!! #100PercentCorruptSarkar #LekkaKodi” ಎಂದು ಟ್ವೀಟ್ ಮಾಡಿದ್ದಾರೆ.
ಇದಲ್ಲದೆ “ಕೊರೊನಾ ನಿಯಂತ್ರಣದಲ್ಲಿ ನಡೆದಿರುವ ಭ್ರಷ್ಟಾಚಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ #LekkaKodi ಎಂಬ ಹ್ಯಾಷ್ ಟ್ಯಾಗ್ನೊಂದಿಗೆ ರಾಜ್ಯ ಸರ್ಕಾರದ ವಿರುದ್ಧ ವಿಡಿಯೋ ಅಭಿಯಾನ ಶುರು ಮಾಡಲಾಗಿದೆ.
“ನಮ್ಮ ಪಕ್ಷದ ಎಲ್ಲ ಶಾಸಕರು, ಸಂಸದರು, ಕಾರ್ಯಕರ್ತರು ವಿಡಿಯೊ ಮಾಡಿ, ಶೇರ್ ಮಾಡುವ ಮೂಲಕ ಇದರಲ್ಲಿ ಭಾಗವಹಿಸಬೇಕೆಂದು ವಿನಂತಿ.”
#LekkaKodi ಎಂದು ರಾಜ್ಯದ ಕಾಂಗ್ರೆಸ್ ನಾಯಕರಿಗೆ ಸೂಚಿಸಿದ್ದಾರೆ.
ಇನ್ನು “ಪಿಪಿಇ ಕಿಟ್, ಮಾಸ್ಕ್, ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್, ಫುಡ್ ಇದಕ್ಕಾಗಿ ಖರ್ಚು ಮಾಡಿದ್ದೆಷ್ಟು..? ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ನೀಡಿದ ಅನುದಾನ ಎಷ್ಟು..? ಕೊರೊನಾ ಸಂತ್ರಸ್ತರ ಆರೈಕೆಗೆ ಖರ್ಚು ಮಾಡಿದ್ದೆಷ್ಟು ?” ಎಂದು ಸರ್ಕಾರಕ್ಕೆ ಪ್ರಶ್ನೆ ಕೇಳಿದ್ದಾರೆ.
Follow us on Social media