ಹಾಸನ: ಹಾಸನದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು ನಿನ್ನೆ ಮತ್ತೋರ್ವ ಕೊರೋನಾ ವೈರಸ್ ಸೋಂಕಿತರು ಸಾವನ್ನಪ್ಪಿದ್ದಾರೆ.
ಮೂಲಗಳ ಪ್ರಕಾರ ಅರಸೀಕೆರೆಯ 77 ವರ್ಷದ ವೃದ್ಧರೊಬ್ಬರು ಕಳೆದ ರಾತ್ರಿ 11:45ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಆ ಮೂಲಕತ ಜಿಲ್ಲೆಯಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 8ಕ್ಕೆ ಏರಿಕೆಯಾದಂತಾಗಿದೆ.
ನ್ಯುಮೊನಿಯಾ ಹಾಗೂ ರಕ್ತದ ಒತ್ತಡ ಮತ್ತಿತರ ಸಮಸ್ಯೆಗಳಿಂದ ಬಳಲುತ್ತಿದ್ದ ಸೋಂಕಿತರನ್ನು ಹಾಸನದ ಕೋವಿಡ್ ಆಸ್ಪತ್ರೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ ಕೃಷ್ಣಮೂರ್ತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಸತೀಶ್ ತಿಳಿಸಿದ್ದಾರೆ.
Follow us on Social media