ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಕರೆನೀಡಿರುವ ‘ಜನತಾ ಕರ್ಫ್ಯೂ’ಗೆ ಬೆಂಬಲ ವ್ಯಕ್ತಪಡಿಸಿರುವ ಬೆಂಗಳೂರಿನ ನಮ್ಮ ಮೆಟ್ರೋ, ಕರೋನವೈರಸ್ ಹರಡುವುದನ್ನು ತಡೆಗಟ್ಟಲು ಮಾರ್ಚ್ 22 ರಂದು ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವುದಾಗಿ ಹೇಳಿದೆ.
ಪ್ರಧಾನಿಯವರು ಕರೆ ನೀಡಿರುವ ‘ಜನತಾ ಕರ್ಫ್ಯೂ’ಗೆ ಅನೇಕ ಸಂಘ ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿರುವುದರಿಂದ ಬಸ್ಗಳು, ಟ್ಯಾಕ್ಸಿಗಳು ಮತ್ತು ಆಟೋರಿಕ್ಷಾಗಳ ಸೇವೆಗಳು ಭಾನುವಾರ ಲಭ್ಯವಿಲ್ಲದಿರುವ ಸಾಧ್ಯತೆ ಇದೆ.
ಭಾನುವಾರ ಯಾವುದೇ ಮೆಟ್ರೋ ರೈಲು ಸೇವೆ ಇರುವುದಿಲ್ಲ. ಸಭೆಯ ನಂತರ ಸಾರ್ವಜನಿಕರ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬಿಎಂಆರ್ಸಿಎಲ್ ವಕ್ತಾರ ಟಿ ಎಲ್ ರವಿ ಪ್ರಕಾಶ್ ತಿಳಿಸಿದ್ದಾರೆ.