ಬೆಂಗಳೂರು : ಮೂರೂವರೆ ವರ್ಷದ ಮಗುವನ್ನು ವೇಲ್ನಿಂದ ನೇಣು ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ RR ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ದೀಪಾ (31) ತನ್ನ ಮಗು ರಿಯಾಳನ್ನು ಕೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಒಂದು ವಾರದಿಂದ ಜ್ವರ ಮತ್ತು ಹೊಟ್ಟೆ ನೋವಿನಿಂದ ದೀಪಾ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.
ಬ್ರಹ್ಮಾವರ ಮೂಲದವರಾದ ದೀಪಾ ತನ್ನ ಕುಟುಂಬದ ಜೊತೆ ಆರ್ಆರ್ ನಗರದ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದರು. ಜ್ವರ ಮತ್ತು ಹೊಟ್ಟೆ ನೋವು ಹಿನ್ನೆಲೆ ಚಿಕಿತ್ಸೆ ಕೂಡಾ ಪಡೆಯುತ್ತಿದ್ದರು. ಜ್ವರ ಮತ್ತು ಹೊಟ್ಟೆ ನೋವು ಹಿನ್ನೆಲೆ ಚಿಕಿತ್ಸೆ ಕೂಡಾ ಪಡೆಯುತ್ತಿದ್ದರು.
ಡೆತ್ ನೋಟ್ ನಲ್ಲಿ” Nobody is responsible for it i just felt life is full of shits i am sorry mom and divya Love you shona ಎಂದು ದೀಪಾ ಬರೆದಿದ್ದಾರೆ.
ಇನ್ನೂ ಸ್ಥಳದಲ್ಲಿ ಆರ್ ಆರ್ ನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ದೀಪಾ ಅವರ ಪತಿ ಆದರ್ಶ್ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾರೆ. 2017ರಲ್ಲಿ ದೀಪಾ ಮತ್ತು ಆದರ್ಶ್ ಅವರ ಮದುವೆ ಆಗಿತ್ತು.
ಹೊಟ್ಟೆನೋವಿಗೆ ಚಿಕಿತ್ಸೆ ಪಡೆದರೂ ನೋವು ಕಡಿಮೆ ಆಗದ ಕಾರಣ ದೀಪಾ ಜಿಗುಪ್ಸೆಗೊಂಡಿದ್ದರು ಎಂದು ತಿಳಿದು ಬಂದಿದ್ದರು.
ರಾತ್ರಿ ಮಲಗಿದ್ದ ವೇಳೆ ಮಗುವಿನ ಕುತ್ತಿಗೆಗೆ ವೇಲ್ ಬಿಗಿದು ನೇಣು ಹಾಕಿ ಕೊಲೆ ಮಾಡಿದ್ದಾರೆ.
Follow us on Social media