ಬೆಂಗಳೂರು: ಕೊರೋನಾ ರೋಗಿಗಳು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವುದಾದರೆ, ಈ ಚಿಕಿತ್ಸೆಗೆ ಎಷ್ಟು ದರ ನಿಗದಿ ಮಾಡಬೇಕು ಎಂಬ ಕುರಿತು ಮುಂದಿನ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.
ಆರೋಗ್ಯ ಸಚಿವ ಶ್ರೀರಾಮುಲು ನೇತೃತ್ವದಲ್ಲಿ ಡಿಸಿಎಂ ಅಶ್ವತ್ಥನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಹಾಗೂ ತಜ್ಞರು ಪಾಲ್ಗೊಂಡಿದ್ದ ಇಂದಿನ ಕೊರೋನಾ ಟಾಸ್ಕ್ ಪೋರ್ಸ್ ಸಭೆಯಲ್ಲಿ ಕೋವಿಡ್ ರೋಗಿಗಳು ಖಾಸಗಿ ಆಸ್ಪತ್ರೆಗೆ ದಾಖಲಾದರೆ ಹೆಚ್ಚು ದರ ತೆಗೆದುಕೊಳ್ಳಲಾಗುತ್ತಿದೆ ಎಂಬ ಕುರಿತು ಚರ್ಚೆ ನಡೆಸಲಾಗಿತ್ತು.
ಈ ಚರ್ಚೆ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಶ್ರೀರಾಮುಲು, “ಖಾಸಗಿ ಆಸ್ಪತ್ರೆಲ್ಲಿ ಕೊರೋನಾ ರೋಗಿಯ ಚಿಕಿತ್ಸೆಗೆ ಇಂತಿಷ್ಟೇ ದರ ನಿಗದಿ ಆಗಬೇಕು ಎಂದು ಡಾಕ್ಟರ್ ಅಸೋಸಿಯೇಷನ್ ಮನವಿ ಮಾಡಿದೆ. ಇದಲ್ಲದೆ ಬೇರೆ ಬೇರೆ ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಎಷ್ಟು ದರ ನಿಗದಿ ಮಾಡಲಾಗಿದೆ? ಎಂದು ಪರಿಶೀಲನೆ ನಡೆಸಲಾಗುವುದು. ಎಬಿ ಎ ಆರ್ ಕೆ ರೋಗಿಗಳಿಗೆ 5,200 ರೂ, ವಿಮೆ ರೋಗಿಗಳಿಗೆ 15,000 ರೂ ಖಾಸಗಿ ಆಸ್ಪತ್ರೆಗಳ ಸಂಘ ಶಿಫಾರಸು ಮಾಡಿದೆ
Follow us on Social media