ಬೆಂಗಳೂರು: ಕೊರೊನಾ ಲಾಕ್ಡೌನ್ ಸಮಯದಲ್ಲಿ ಗಾಂಜಾ ಸೇರಿಸಿದ ಮೂವರು ಯುವಕರು ಯುವಕನೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ಮಂಗಳವಾರ ವಿವೇಕನಗರದಲ್ಲಿ ನಡೆದಿದೆ. ಆಸ್ಟಿನ್ ಟೌನ್ ಬಳಿ ರಾತ್ರಿ ವಿಜಯ್ (20) ಎಂಬ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ.
ಗಾಂಜಾ ನಶೆಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಚಾಕುವಿನಿಂದ ಇರಿದಿದ್ದರಿಂದ ಗಾಯಗೊಂಡ ವಿವೇಕನಗರದ ನಿವಾಸಿ ವಿಜಯ್ ಎಂಬಾತನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಆತನ ಸ್ಥಿತಿ ಚಿಂತಾಜನಕವಾಗಿದೆ. ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಯುವಕನ ಕುತ್ತಿಗೆಗೆ ಚಾಕುವಿನಿಂದ ಇರಿದು ಪರಾರಿಯಾಗಿದೆ.
ವಿವೇಕನಗರ ಪೊಲೀಸರು ಪ್ರಕರಣ ದಾಖಲಿಸಿ. ಕೃತ್ಯ ಎಸಗಿದ ದುಷ್ಕರ್ಮಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.
Follow us on Social media