ಬೆಂಗಳೂರು: ಕಂಕಣ ಸೂರ್ಯಗ್ರಹಣವಾದ ಇಂದು ಬೆಂಗಳೂರಿನಲ್ಲಿ ದಾಖಲೆಯ 196 ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಬರೋಬ್ಬರಿ 453 ಮಂದಿ ಕೊರೋನಾಗೆ ತುತ್ತಾಗಿದ್ದು ಸೋಂಕಿತರ ಸಂಖ್ಯೆ 9,150ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 5 ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ 137ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಪತ್ತೆಯಾಗಿರುವ 9,150 ಪ್ರಕರಣಗಳ ಪೈಕಿ 5,618 ಮಂದಿ ಗುಣಮುಖರಾಗಿದ್ದಾರೆ. 3,391 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Follow us on Social media