ಚಿಕ್ಕಮಗಳೂರು: ಶಾಲಾ ವಿದ್ಯಾರ್ಥಿನಿಯೊಬ್ಬಳು ಕಿರು ಸೇತುವೆ ದಾಟುವ ವೇಳೆ ಕಾಲುಜಾರಿ ಹಳ್ಳಕ್ಕೆ ಬಿದ್ದು ನೀರಿನಲ್ಲಿ ಕೊಚ್ಚಿಹೋಗಿರುವ ದುರ್ಘಟನೆ ನಡೆದಿದೆ.
ಚಿಕ್ಕಮಗಳೂರಿನ ಹೊಸಪೇಟೆ ಗ್ರಾಮದ ಕಾಫಿ ಎಸ್ಟೇಟ್ ನಲ್ಲಿ ಘಟನೆ ನಡೆದಿದ್ದು ಸುಪ್ರೀತ (7) ನೀರಿನಲ್ಲಿ ಕೊಚ್ಚಿಹೋದ ಬಾಲಕಿ. ಹೊಸಪೇಟೆ ಕಿರಿಯ ಪ್ರಾರ್ಥಮಿಕ ಶಾಲೆಯ ವಿದ್ಯಾರ್ಥಿನಿಯಾದ ಸುಪ್ರೀತ ಶಾಲೆ ಬಿಟ್ಟು ಸಂಜೆ ಮನೆಗೆ ಬರುತ್ತಿದ್ದಾಗ ಹೊಸಪೇಟೆ ಗ್ರಾಮದ ಕಾಫಿ ಎಸ್ಟೇಟ್ ನಲ್ಲಿರುವ ಹಳ್ಳವನ್ನು ದಾಟುವ ವೇಳೆ ಕಾಲು ಜಾರಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾಳೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ಬಾಲಕಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Follow us on Social media