ಬೆಳಗಾವಿ: ಅಗತ್ಯ ವಸ್ತುಗಳ ಖರೀದಿ ವೇಳೆ ಜನರು ಗುಂಪು ಸೇರದಂತೆ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ಸೂಚಿಸಿದ್ದಾರೆ.
ಜಿಲ್ಲಾ ಕಚೇರಿಯಲ್ಲಿ ಶಾಸಕರೊಂದಿಗೆ ಗುರುವಾರ ಸಭೆ ನಡೆಸಿದ ಸಚಿವರು, ಜನರಿಗೆ ಅಗತ್ಯ ವಸ್ತುಗಳನ್ನು ಮನೆಗಳ ಬಾಗಿಲಿಗೆ ತಲುಪಿಸಿದ್ದೇ ಆದರೆ, ಇಂತಹ ಗುಂಪು ಸೇರುವ ಸಂದರ್ಭಗಳನ್ನು ತಪ್ಪಿಸಬಹುದು.
ಜಿಲ್ಲೆಗಳಲ್ಲಿಯೇ ವೈರಸ್ ಕುರಿತು ಪರೀಕ್ಷೆ ನಡೆಸಲು ಪ್ರಯೋಗಾಲಯಗಳನ್ನು ಸ್ಥಾಪನೆ ಮಾಡುವ ವಿಚಾರ ಸರ್ಕಾರದ ನಿರ್ಧಾರಕ್ಕೆ ಬಿಟ್ಟಿದೆ. ಈಗಾಗಲೇ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ. ಜನರಿಗೆ ಅಗತ್ಯ ವಸ್ತುಗಳು ಸೂಕ್ತ ರೀತಿಯಲ್ಲಿ ತಲುಪುವಂತೆ ನೋಡಿಕೊಳ್ಳಿ. ಯಾವುದೇ ಅಗತ್ಯ ವಸ್ತುಗಳ ಅಗತ್ಯತೆ ಕಂಡು ಬಂದಿದ್ದೇ ಆದರಲ್ಲಿ ಆ ಕುರಿತು ಸ್ಥಳೀಯ ಅಧಿಕಾರಿಗಳು ಸರ್ಕಾರದ ಗಮನಕ್ಕೆ ತರಬೇಕೆಂದು ತಿಳಿಸಿದ್ದಾರೆ.
Follow us on Social media