Breaking News

ಜೈಲಿನಿಂದ ಬಿಡುಗಡೆಯಾದ ವಿದ್ಯಾರ್ಥಿನಿ ಅಮೂಲ್ಯ ಲಿಯೋನಾ

ಬೆಂಗಳೂರು: ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ದೇಶದ್ರೋಹದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ವಿದ್ಯಾರ್ಥಿನಿ ಅಮೂಲ್ಯ ಲಿಯೊನಾ ನರೋನಾ ಪರಪ್ಪನ ಅಗ್ರಹಾರ ಜೈಲಿನಿಂದ ಶುಕ್ರವಾರ ಬಿಡುಗಡೆಯಾಗಿದ್ದಾರೆ.

ಫೆಬ್ರವರಿ 21ರಂದು ಬೆಂಗಳೂರಿನಲ್ಲಿ ಸಿಎಎ, ಎನ್‌ಆರ್‌ಸಿ ವಿರೋಧಿಸಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಂಸದ ಅಸಾದುದ್ದಿನ್ ಓವೈಸಿ ಭಾಗಿಯಾಗಿದ್ದ ಈ ಸಮಾವೇಶದಲ್ಲಿ ಅಮೂಲ್ಯ ಲಿಯೋನಾ ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿದ್ದರು.

ಈ ಕುರಿತಂತೆ ಮೇ 26, ಮೇ 29ರಂದು ಇಮೇಲ್ ಕಳಿಸಿದ್ದರು. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಇದೆಲ್ಲ ಫಲ ನೀಡದಿದ್ದಾಗ ಜೂನ್ 2 ರಂದು ಅರ್ಜಿ ಸಲ್ಲಿಸಿದ್ದಾರೆ. ಇದಾದ ಬಳಿಕ ಜೂನ್ 3 ರಂದು ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ ಎಂದು ವಕೀಲ ಪ್ರಸನ್ನ ತಿಳಿಸಿದರು. ಹೀಗಾಗಿ, ಕಾನೂನಿಗೆ ಬದ್ಧವಾಗಿ ಸಿಆರ್ ಪಿ ಸಿ ಸೆಕ್ಷನ್ 162 ಕಲಂ 2 ಅಡಿಯಲ್ಲಿ ಷರತ್ತುಬದ್ಧ ಜಾಮೀನು ನೀಡಲಾಗಿದೆ. 

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×