ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಹಿರಿಯ ಪುತ್ರಿ ಐಶ್ವರ್ಯಾ ವಿವಾಹಕ್ಕೆ ಭರ್ಜರಿ ಸಿದ್ಧತೆ ನಡೆದಿದ್ದು, ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಅಳಿಯ, ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಹಿರಿಯ ಪುತ್ರ ಅಮರ್ಥ್ಯ ಜೊತೆ ನಿಶ್ಚಿಯವಾಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ.
ಡಿ.ಕೆ ಶಿವಕುಮಾರ್ ಮತ್ತು ಸಿದ್ಧಾರ್ಥ್ ಆತ್ಮೀಯ ಸ್ನೇಹಿತರು ಮಾತ್ರವಲ್ಲ, ಉದ್ಯಮದಲ್ಲಿ ಪಾಲುದಾರರು ಕೂಡ. ಸಿದ್ಧಾರ್ಥ್ ಮಾವ ಅಂದರೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಾ ಶಿವಕುಮಾರ್ ಗೆ ಹಿಂದೆ ರಾಜಕೀಯ ಗುರುವಾಗಿದ್ದವರು. ಹೀಗಾಗಿ ಸಿದ್ಧಾರ್ಥ್ ಪುತ್ರನೊಂದಿಗೆ ಶಿವಕುಮಾರ್ ಪುತ್ರಿ ವಿವಾಹ ನಡೆಯಲಿದೆ ಎನ್ನಲಾಗುತ್ತಿದೆಯಾದರೂ ಈ ಬಗ್ಗೆ ಕಾಂಗ್ರೆಸ್ ವಲಯದಿಂದಲಾಗಲೀ ಅಥವಾ ಡಿ.ಕೆ.ಶಿವಕುಮಾರ್ ಆಗಲೀ ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
Follow us on Social media