ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕಿನ ಪಳವಳ್ಳಿ ಬಳಿ ಖಾಸಗಿ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿ ಚಾಲಕ ರಘು ಎಂಬಾತನನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ. ಚಾಲಕನ ಹೆಸರು ಬಳಸದೆ ಬಸ್ ನಂಬರ್ ಉಲ್ಲೇಖಿಸಿ FIR ದಾಖಲು ಮಾಡಲಾಗಿದೆ. KA06 C8933 SVT ಬಸ್ ಚಾಲಕ A1 ಆರೋಪಿ ಎಂದು ಉಲ್ಲೇಖ ಮಾಡಿ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿನ್ನೆ ಪಳವಳ್ಳಿ ಕಟ್ಟೆ ತಿರುವಿನಲ್ಲಿ ಸಂಭವಿಸಿದ ಖಾಸಗಿ ಬಸ್ ಪಲ್ಟಿ ದುರಂತದಲ್ಲಿ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿದ್ದು ಇಬ್ಬರು ಕಾಲೇಜು ವಿದ್ಯಾರ್ಥಿನಿಯರಾಗಿದ್ದಾರೆ. ಮೃತಪಟ್ಟವರ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ. 40 ಕ್ಕೂ ಹೆಚ್ಚು ಮಂದಿ ಗಾಯಾಳುಗಳು ತುಮಕೂರು ಹಾಗೂ ಬೆಂಗಳೂರಿನ ವಿಕ್ಟೋರಿಯಾ, ನಿಮ್ಹಾನ್ಸ್‌ನಲ್ಲಿ 7 ಮಂದಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಲಾಗುತ್ತಿದೆ.
ಮೃತರನ್ನು ಅಜಿತ್, ಕಲ್ಯಾಣ್, ಶಾನವಾಜ್, ಬಾಬು ವಲಿ ಹಾಗೂ ಒಂದೇ ಕುಟುಂಬದ ಅಮೂಲ್ಯ, ಹರ್ಷಿತಾ ಎಂದು ಗುರುತಿಸಲಾಗಿದೆ. ಇನ್ನು ಬಸ್ ದುರಂತದಲ್ಲಿ ನಾಪತ್ತೆಯಾಗಿದ್ದ ಕಂಡಕ್ಟರ್ ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.