ತುಮಕೂರು: ಗುಬ್ಬಿ ಪಟ್ಟಣದಲ್ಲಿ ಜೆಡಿಎಸ್ ಮುಖಂಡ ಹಾಗೂ ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಜಿ.ಸಿ.ನರಸಿಂಹಮೂರ್ತಿ ಅಲಿಯಾಸ್ ಕುರಿ ಮೂರ್ತಿ ಅವರ ಕೊಲೆ ಪ್ರಕರಣ ಸಂಬಂಧ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.
ಬುಧವಾರ ಮಧ್ಯಾಹ್ನ ಗುಬ್ಬಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮುಂಭಾಗ ನರಸಿಂಹಮೂರ್ತಿ (50) ಕೊಲೆಯಾಗಿದ್ದರು. ಪ್ರತಿನಿತ್ಯ ಟೀ ಅಂಗಡಿ ಬಳಿ ಕುಳಿತು ದಲಿತರು, ಸಾರ್ವಜನಿಕರ ಕುಂದುಕೊರತೆ ಆಲಿಸುತ್ತಿದ್ದ ಜಿ.ಸಿ.ನರಸಿಂಹಮೂರ್ತಿ ಎಂದಿನಂತೆ ಟೀ ಅಂಗಡಿ ಮುಂದೆ ಕುಳಿತಿದ್ದಾಗ ಸ್ಥಳಕ್ಕೆ ಬಂದ ಐವರು ದುಷ್ಕಮಿರ್ಗಳ ತಂಡ ಏಕಾಏಕಿ ದಾಳಿ ಮಾಡಿ ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದರು.
ಘಟನೆ ಸಂಬಂಧ ಪೊಲೀಸರು ಕಿರಣ್, ಧೀರಜ್, ಬಸವರಾಜ್, ಫಯಾಜ್ ಸೇರಿ ಐವರನ್ನು ತಿಪಟೂರು ಬಳಿ ಬುಧವಾರ ರಾತ್ರಿ ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
ಈ ನಡುವೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಗಿದ ಬಳಿಕ ನರಸಿಂಹಮೂರ್ತಿ ಮೃತದೇಹವನ್ನು ಕುಟುಂಬಸ್ಥರಿಗೆ ಪೊಲೀಸರು ಹಸ್ತಾಂತರ ಮಾಡಿದ್ದಾರೆ.
Follow us on Social media