ತುಮಕೂರು : ಮಾಜಿ ಪ್ರಧಾನಿ ದೇವೇಗೌಡರು ಹತ್ತಿರದಲ್ಲೇ ನಾಲ್ವರ ಮೇಲೆ ಹೊಗುತ್ತಾರೆ ಎಂದು ಮಾಜಿ ಶಾಸಕ ಕೆ.ಎನ್. ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
- ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಎನ್. ರಾಜಣ್ಣ, ಈಗಾಗಲೇ ದೇವೇಗೌಡರು ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗ್ತಾರೆ. ನಾಲ್ವರ ಮೇಲೆ ಹೋಗುವ ಕಾಲ ಹತ್ತಿರದಲ್ಲಿಯೇ ಇದೆ ಎಂದು ವ್ಯಂಗ್ಯವಾಡಿದ್ದಾರೆ.ಇನ್ನು ಕೆ.ಎನ್.ರಾಜಣ್ಣ ಸಾವಿನ ರಾಜಕಾರಣ ಮಾಡಿರುವುದಕ್ಕೆ ಕುಮಾರಸ್ವಾಮಿ, ಸಿ.ಎಂ.ಇಬ್ರಾಹಿಂ ಸೇರಿದಂತೆ ಹಲವರು ಖಂಡಿಸಿದ್ದು, ಅಲ್ಲದೇ ಸಾರ್ವಜನಿಕರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.