ತುಮಕೂರು: ಕಳೆದ ವರ್ಷ 45 ವರ್ಷದ ವ್ಯಕ್ತಿ ಜೊತೆಗೆ 25ರ ಯುವತಿ ಮದುವೆಯಾಗಿದ್ದ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿತ್ತು. ಆದರೀಗ ಈ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶಂಕರಣ್ಣ(45) ಮೃತ ದುರ್ದೈವಿಯಾಗಿದ್ದು, ಕಳೆದ ವರ್ಷ ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮದ ಬಳಿಯಿರುವ ಅಕ್ಕಿಮರಿಪಾಳ್ಯದ ಶಂಕರಣ್ಣ ಮತ್ತು ಮೇಘನಾ ಅವರ ಮದುವೆ ನಡೆದಿತ್ತು.
ಆದರೆ ಮದುವೆಯಾದ ಐದು ತಿಂಗಳಿನಲ್ಲಿಯೇ ಶಂಕರಣ್ಣ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಮೂರ್ನಾಲ್ಕು ದಿನದಿಂದ ಗಂಡ, ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಹೀಗಾಗಿ ಕೋಪ ಮಾಡಿಕೊಂಡು ಸೋಮವಾರ ಮನೆ ಬಿಟ್ಟು ಹೋಗಿದ್ದ ಶಂಕರಣ್ಣನವರು, ಕುಣಿಗಲ್ ತಾಲೂಕಿನ ಅಕ್ಕಿಮರಿಪಾಳ್ಯದಲ್ಲಿದ್ದ ತಮ್ಮ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
2021ರಲ್ಲಿ ಮದುವೆಯಾಗಿದ್ದ ಈ ದಂಪತಿ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಸಂತೆ ಮಾವತ್ತೂರು ಗ್ರಾಮದ ನಿವಾಸಿಯಾಗಿದ್ದ ಮೇಘನಾಗೆ ಈ ಮುನ್ನ ಬೇರೆಯವರೊಂದಿಗೆ ಮದುವೆಯಾಗಿತಂತೆ.
Follow us on Social media