Breaking News

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 237 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಶನಿವಾರದಂದು ಮತ್ತೆ 237 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3311ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು 109 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ, ದಕ್ಷಿಣ ಕನ್ನಡದಲ್ಲಿ 1848 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಇನ್ನು, ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು ಮತ್ತೆ 4 ಮಂದಿ ಚಿಕಿತ್ಸೆ ಫಲಕಾರಿಯಾಗದೆ, ಸಾವನ್ನಪ್ಪಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಮಾಹಿತಿ ನೀಡಿದೆ

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×