ನವದೆಹಲಿ: ದೇಶದಾದ್ಯಂತ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ವೈರಸ್’ಗೆ ಈ ವರೆಗೂ 377 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, ಸೋಂಕಿತರ ಸಂಖ್ಯೆ 12,000 ಗಡಿಯತ್ತ ತಲುಪಿದೆ.
ಕಳೆದ 24 ಗಂಟೆಗಳಲ್ಲಿ ಹೊಸದಾಗಿ 38 ಮಂದಿ ಸಾವನ್ನಪ್ಪಿದ್ದು, 1076 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರಂತೆ ದೇಶದಲ್ಲಿ ಸೋಂಕಿತರ ಸಂಖ್ಯೆ 11,439ಕ್ಕೆ ಏರಿಕೆಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 377ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ದೇಶದಲ್ಲಿ ಈವರೆಗೂ 32 ಕೋಟಿ ಜನರಿಗೆ ಆರ್ಥಿಕ ಸಹಾಯ ಮಾಡಲಾಗಿದ್ದು. ಏಪ್ರಿಲ್ 13ರವರೆಗೂ ರೂ.29,352 ಕೋಟಿಯಷ್ಟು ವೆಚ್ಚವಾಗಿದೆ ಎಂದು ಮಾಹಿತಿ ನೀಡಿದೆ.
ನಿನ್ನೆಯಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದಾದ್ಯಂತ ಲಾಕ್’ಡೌನ್’ನ್ನು ಮೇ.3ರವರೆಗೂ ವಿಸ್ತರಣೆ ಮಾಡಿದ್ದು, ಒಡಿಶಾ, ಮಹಾರಾಷ್ಟ್ರ, ತಮಿಳುನಾಡು, ಅರುಣಾಚಲ ಪ್ರದೇಶ, ಮೇಘಾಲಯ, ಮಿಜೋರಾಂ, ಪಾಂಡಿಚೆರಿ ರಾಜ್ಯಗಳು ಏಪ್ರಿಲ್ 30ರವರೆಗೂ ಲಾಕ್’ಡೌನ್ ವಿಸ್ತರಣೆ ಮಾಡಿದೆ.
ಈ ನಡುವೆ ಕೇಂದ್ರ ಸರ್ಕಾರ ಲಾಕ್’ಡೌನ್’ನ್ನು ಮೇ.3ರವರೆಗೂ ವಿಸ್ತರಣೆ ಮಾಡಿರುವ ಹಿನ್ನೆಲೆಯಲ್ಲಿ ತಿರುಮಲ ತಿರುಪತಿಯಲ್ಲಿಯಲ್ಲಿಯೂ ದರ್ಶನಕ್ಕೆ ಹೇರಲಾಗಿದ್ದ ನಿರ್ಬಂಧವನ್ನು ಮೇ.3ರವರೆಗೂ ವಿಸ್ತರಿಸಲಾಗಿದೆ. ಆದರೆ, ತಿರುಪತಿಯಲ್ಲಿ ಎಂದಿನಂತೆ ಪೂಜೆ, ಪುನಸ್ಕಾರಗಳನ್ನು ಐಸೋಲೇಷನ್ ನಲ್ಲಿಯೇ ನಡೆಸಲಾಗುತ್ತದೆ ಎಂದು ದೇಗುಲದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Follow us on Social media