ಬೆಂಗಳೂರು: ಜೂನ್ 18 ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಮತ್ತು ಅವರ ಪರೀಕ್ಷಾ ಕೇಂದ್ರದ ವಿವರವುಳ್ಳ ತಾತ್ಕಾಲಿಕ ಪಟ್ಟಿ ಬಿಡುಗಡೆಯಾಗಿದೆ.
ವಿದ್ಯಾರ್ಥಿಗಳು ಇರುವ ಜಿಲ್ಲೆಯಲ್ಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿರುವ ಇಲಾಖೆ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿ ರಿಲೀಸ್ ಮಾಡಿದೆ.
ಸಂಬಂಧ ಪಟ್ಟ ಕಾಲೇಜುಗಳ ಪ್ರಾಚಾರ್ಯರ ಮೂಲಕ ತಿದ್ದುಪಡಿಗೆ ಜೂನ್ 5ರವೆರೆಗೆ ಅವಕಾಶ ಕಲ್ಪಿಸಲಾಗಿದೆ. ಜೂನ್ 7 ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುವುದು. www,pue.kar.nic.in ವೆಬ್ ಸೈಟ್ ನಲ್ಲಿ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಂಡು ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಹೋಗಬಹುದಾಗಿದೆ.
Follow us on Social media