ಧಾರವಾಡ: ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ 8 ವರ್ಷದ ಬಾಲಕಿ ಶ್ರೀದೇವಿ ಮೃತದೇಹ ಪತ್ತೆಯಾಗಿದೆ. ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಕೂಡ ಭಾರೀ ಮಳೆಯಾಗುತ್ತಿದ್ದು ಧಾರವಾಡದ ಕಲಘಟಗಿ ತಾಲ್ಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿನ 3ನೇ ತರಗತಿ ಬಾಲಕಿ ಶ್ರೀದೇವಿ ತೀವ್ರ ಪ್ರವಾಹಕ್ಕೆ ನೀರಿನಲ್ಲಿ ಕೊಚ್ಚಿ ಹೋಗಿದ್ದಳು.
ಬಾಲಕಿಯ ಮೃತದೇಹ ಪತ್ತೆಗೆ ಎನ್ ಡಿಆರ್ ಎಫ್ ತಂಡ ಆಗಮಿಸಿ ತೀವ್ರ ಹುಡುಕಾಟ ನಡೆಸಿತ್ತು. ಬಾಲಕಿ ತನ್ನ ತಾಯಿಯ ಜೊತೆ ಹೊಲಕ್ಕೆ ತೆರಳುತ್ತಿದ್ದಾಗ ಈ ಅವಘಡ ನಡೆದಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ತಂದೆಗೆ ಊಟದ ಬುತ್ತಿ ಕೊಡಲು ಶ್ರೀದೇವಿ ಮತ್ತವಳ ತಾಯಿ ತೆರಳುತ್ತಿದ್ದರು. ಈ ವೇಳೆ ರಸ್ತೆ ದಾಟುವಾಗ ಕಾಲು ಜಾರಿದೆ. ರಸ್ತೆಯ ಮೇಲೆ ಹರಿಯುತ್ತಿದ್ದ ನೀರಿನ ರಭಸಕ್ಕೆ ಬಾಲಕಿ ನೀರಲ್ಲಿ ಕೊಚ್ಚಿ ಹೋಗಿದ್ದಾಳೆ.
ಶ್ರೀದೇವಿ ಗಾಣಿಗೇರ್ ಳನ್ನು ಮೇಲೆತ್ತಲು ಸ್ಥಳೀಯ ಯುವಕರು ಪ್ರಯತ್ನಿಸಿದರೂ ಪ್ರಯೋಜನವಾಗಿರಲಿಲ್ಲ.
Follow us on Social media