ಬೆಂಗಳೂರು: ಕೊರೋನಾ ಲಾಕ್ ಡೌನ್ ನಿಂದಾಗಿ ನಿಂತು ಹೋಗಿದ್ದ ಧಾರಾವಾಹಿಗಳ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಮುಂದಿನ ವಾರದಿಂದ ಧಾರವಾಹಿಗಳ ನಿರ್ಮಾಣಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಇದಕ್ಕೂ ಷರತ್ತು ಹಾಕಿದ್ದು ರಸ್ತೆಗಳಲ್ಲಿ ಮತ್ತು ಬೀದಿಗಳಲ್ಲಿ ಚಿತ್ರೀಕರಣವನ್ನು ಮಾಡಲು ಅವಕಾಶ ನೀಡಿಲ್ಲ.
ಧಾರಾವಾಹಿಗಳ ಚಿತ್ರೀಕರಣ ಸಮಯದಲ್ಲಿ ಕಲಾವಿದರಿರುವ ಕಾರಣ ಚಿತ್ರೀಕರಣಕ್ಕೆ ಅವಕಾಶ ನೀಡಬೇಕು ಎಂದು ಕಲಾವಿದರ ಒಕ್ಕೂಟ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವನ್ನು ಭೇಟಿ ಮಾಡಿ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕೆಲವೊಂದು ಷರತ್ತುಗಳ ಮೇಲೆ ಚಿತ್ರೀಕರಣ ಅನುಮತಿ ನೀಡಿದೆ.
ಆದರೆ ಸಿನಿಮಾ ಮತ್ತು ರಿಯಾಲಿಟಿ ಶೋಗಳಿಗೆ ಅನುಮತಿ ನೀಡಲಾಗಿಲ್ಲ.
Follow us on Social media