ಬೆಂಗಳೂರು : ಬುದ್ದಿವಂತರ ಜಿಲ್ಲೆ ಎಂಬ ದಕ್ಷಿಣಕನ್ನಡ ದ ಖ್ಯಾತಿಗೆ ಅಸೂಯೆಪಟ್ಟು ಬಿಜೆಪಿ ವರಿಷ್ಠರು, ನಳಿನ್ ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿಸಿದ್ದು, ಬಿಜೆಪಿಯ ಬೌದ್ದಿಕ ದಾರಿದ್ರ್ಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ.
ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ದ ಅನಗತ್ಯ ಆರೋಪ ಮಾಡುತ್ತಿದ್ದು, ಅವರು ದಲಿತರು, ಹಿಂದುಳಿದ ವರ್ಗಗಳ ನಕಲಿ ನಾಯಕ ಎಂಬ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಇದೀಗ ಸಿದ್ದರಾಮಯ್ಯ ವ್ಯಂಗ್ಯವಾಗಿ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಳಿನ್ ಕುಮಾರ್ ಕಟೀಲ್ ಅವರನ್ನು ಬಿಜೆಪಿ ವರಿಷ್ಠರು ಪಕ್ಷದ ಅಧ್ಯಕ್ಷರನ್ನಾಗಿಸಿದ್ದು, ಬಿಜೆಪಿಯ ಬೌದ್ದಿಕ ದಾರಿದ್ರ್ಯ ಇದ್ದಿರಬಹುದು ಎಂದು ಹೇಳಿದ್ದಾರೆ.
ಇನ್ನು ಹಿಂದು ಧರ್ಮಕ್ಕೆ ಸೇರಿರುವ ಮಂಗಳೂರಿನ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನಿಮ್ಮ ಖಾಸಾ ದೋಸ್ತ್ ನರೇಶ್ ಶೆಣೈಯನ್ನು ರಕ್ಷಿಸುತ್ತಿರುವವರು ಯಾರೆಂದು ತಿಳಿಸುತ್ತಿರಾ ಮತ್ತು ಬಾಳಿಗರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಅವರ ಸೋದರಿಯರಿಗೆ ಯಾವಾಗ ನ್ಯಾಯಕೊಡಿಸುತ್ತೀರಿ ಎಂದು ನಳಿನ್ ಕುಮಾರ್ ಕಟೀಲ್ ಅವರನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Follow us on Social media