ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ ಮತ್ತು ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಕೆಲಸಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಿಎಂ ಬಿಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಅದರಂತೆ ನಾಳೆಯಿಂದ ರಾತ್ರಿ 8ರಿಂದ ಬೆಳಗ್ಗೆ 5 ಗಂಟೆಯವರೆಗೂ ನೈಟ್ ಕರ್ಫ್ಯೂ, ಜುಲೈ 5ರಿಂದ ಪ್ರತಿ ಭಾನುವಾರ ಲಾಕ್ ಡೌನ್ ಮಾಡಲು ನಿರ್ಧಾರಿಸಲಾಗಿದೆ.
ಜುಲೈ 5ರಿಂದ ಭಾನುವಾರ ಲಾಕ್ ಡೌನ್ ವೇಳೆ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಬಸ್ಸು, ಟ್ಯಾಕ್ಸಿ ಸೇರಿದಂತೆ ಎಲ್ಲಾ ಸೇವೆಗಳು ಬಂದ್ ಆಗಲಿವೆ.
ಇನ್ನು ಸರ್ಕಾರಿ ನೌಕರರೂ ಕೊರೋನಾಗೆ ತುತ್ತಾಗುತ್ತಿರುವುದರಿಂದ ಮುಂದಿನ ವಾರದಿಂದ 5 ದಿನ ಮಾತ್ರ ಸರ್ಕಾರಿ ಕಚೇರಿಗಳು ಕೆಲಸ ನಿರ್ವಹಿಸಲಿವೆ.
Follow us on Social media