ಬೆಂಗಳೂರು: ರಾಜ್ಯದಲ್ಲಿ ನಾಳೆ ಜು.14ರ ಮಂಗಳವಾರ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ,ಕೊರೊನಾ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಅಥವಾ ಪಾಲಕರು ಕಾಲೇಜಿಗೆ ಭೇಟಿ ನೀಡುವುದು ಬೇಡ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಂತ ಪ್ರತಿ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಫಲಿತಾಂಶದ ವಿವರ ನಾಳೆ ಬೆಳಗ್ಗೆ 11.30ಕ್ಕೆ ವಿದ್ಯಾರ್ಥಿಗಳ ಮೊಬೈಲ್ ಗೆ ಫಲಿತಾಂಶ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 4ಕ್ಕೆ ಪ್ರಾರಂಭವಾಗಿತ್ತು ಆರಂಭವಾಗಿತ್ತು. ಮಾರ್ಚ್ ಮೂರನೇ ವಾರದಲ್ಲಿ ಕೋವಿಡ್ ದೃಷ್ಟಿಯಿಂದ ಲಾಕ್ ಡೌನ್ ಹೇರಲಾದ ಹಿನ್ನಲೆಯಲ್ಲಿ ಮಾರ್ಚ್ 23ರಂದು ನಡೆಯಬೇಕಿದ್ದ ಇಂಗ್ಲೀಷ್ ಪರೀಕ್ಷೆಯನ್ನು ಮುಂದೂಡಲಾಗಿತ್ತು. ನಂತರ ಸೂಕ್ತ ಸುರಕ್ಷಿತ ವ್ಯವಸ್ಥೆಯೊಂದಿಗೆ ಜೂನ್ 18ರಂದು ಇಂಗ್ಲೀಷ್ ಪರೀಕ್ಷೆ ನಡೆಸಲಾಗಿತ್ತು.
Follow us on Social media