Breaking News

ನೇಮಕಾತಿ 2022: ಕೊಡಗಿನಲ್ಲಿ 35 ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ

ಕೊಡಗು ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಹುದ್ದೆ ಹೆಸರು: ಗ್ರಾಮ ಲೆಕ್ಕಿಗ
ಕರ್ತವ್ಯ ಸ್ಥಳ: ಕೊಡಗು ಜಿಲ್ಲೆ
ಖಾಲಿಯಿರುವ ಹುದ್ದೆಗಳ ಸಂಖ್ಯೆ: ಒಟ್ಟು 35 

ಶೈಕ್ಷಣಿಕ ಅರ್ಹತೆ: 
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿ.ಯು.ಸಿ. ಪರೀಕ್ಷೆ ಅಥವಾ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (CBSE) ಅಥವಾ ಐ.ಸಿ.ಎಸ್.ಇ (ICSE) ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ವೇತನ: ಮಾಸಿಕ ರೂ. 21,400 ರಿಂದ ರೂ. 42,000 

ಆಯ್ಕೆ ವಿಧಾನ: ದ್ವಿತೀಯ ಪಿ.ಯು.ಸಿ. ಪರೀಕ್ಷೆ ಅಥವಾ CBSE ಅಥವಾ ICSE ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ (On Merit) ಆಧಾರದ ಮೇಲೆ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ (ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ಅರ್ಜಿ ಶುಲ್ಕ:
ಪ.ಜಾತಿ/ಪ.ಪಂ/ಪ್ರ1 ರ ಅಭ್ಯರ್ಥಿಗಳು ರೂ. 200
ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 400

ಶುಲ್ಕ ಪಾವತಿ ವಿಧಾನ: 
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಇಲಾಖೆಯ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 19, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಮೇ 19, 2022

ಹೆಚ್ಚಿನ ಮಾಹಿತಿಗಾಗಿ (ಅಧಿಸೂಚನೆ) https://ggle.io/4w4R
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ https://bityl.co/Buzu

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×