ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಬೆಂಗಳೂರು ಹಾಗೂ ಮೈಸೂರು ಪ್ರವಾಸಕ್ಕಾಗಿ ರಾಜ್ಯ ಸರಕಾರ ಒಟ್ಟು 34 ಕೋಟಿ ರೂ. ಖರ್ಚು ಮಾಡಿದ್ದು, ರಸ್ತೆ ಹಾಗೂ ಮೂಲಸೌಕರ್ಯ ಯೋಜನೆಗೆ ಈ ಹಣ ವಿನಿಯೋಗಿಸಲಾಗಿದೆ.
ಮೋದಿಯವರು ಬೆಂಗಳೂರಿನಲ್ಲಿ ಕೇವಲ ನಾಲ್ಕು ಗಂಟೆ ಮಾತ್ರ ಇದ್ದರು. ಇದಕ್ಕಾಗಿ ಬಿಬಿಎಂಪಿ ಭರ್ಜರಿ ಸಿದ್ದತೆ ನಡೆಸಿತ್ತು. ನಗರದಲ್ಲಿ ಪ್ರಧಾನಿ ಸಂಚರಿಸಿದ ಪ್ರತಿ ರಸ್ತೆ ರಸ್ತೆಗಳನ್ನು ರಿಪೇರಿ ಮಾಡಿ ಹೊಳೆಯುವಂತೆ ಮಾಡಲಾಗಿದೆ. ಇದಕ್ಕಾಗಿ 14 ಕೋಟಿ ರೂ. ಖರ್ಚಾಗಿದೆ.
ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಈ ಬಗ್ಗೆ ಮಾಹಿತಿ ನೀಡಿ ಪ್ರಧಾನಿ ರಾಜ್ಯಕ್ಕೆ ಬರುತ್ತಿರುವುದೇ ನಮಗೆಲ್ಲ ಸಂತೋಷದ ವಿಚಾರವಾಗಿದೆ. ಆ ನಿಟ್ಟಿನಲ್ಲಿ ತುರ್ತು ಸಂದರ್ಭದಲ್ಲಿ ಅನುದಾನ ಬಳಸಬಹುದಾದ ʻವಿವೇಚನ ಅನುದಾನದಡಿʼ ಫುಟ್‌ಪಾತ್ ರಸ್ತೆ, ಕಾಮಗಾರಿ, ಡಾಂಬರೀಕರಣ, ಚರಂಡಿ, ಊಟ, ವಸತಿ ಕಲ್ಪಿಸಲು ನಿಟ್ಟಿನಲ್ಲಿ ಬರೊಬ್ಬರಿ 14 ಕೋಟಿ ಖರ್ಚು ಮಾಡಲಾಗಿದೆ ಎಂದು ಹೇಳಿದ್ದಾರೆ.
Follow us on Social media