ಬಂಟ್ವಾಳ: ಇಲ್ಲಿನ ಮಂಚಿ ಮಸೀದಿಯ ಬಳಿ ಶುಕ್ರವಾರ ಸಂಜೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಯುವಕನನ್ನು ಬೋಳಂತರು ನಿವಾಸಿ ಉನಾಯಿಸ್ (17) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಮಂಚಿ ಮಸೀದಿಯ ಬಳಿ ಅಪಘಾತ ನಡೆದಿತ್ತು.
ಅತೀ ವೇಗದಿಂದ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ಉನಾಯಿಸ್ ಮಂಚಿ ಮಸೀದಿಯ ಬಳಿ ಲಾರಿವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ರಿಕ್ಷಾಕ್ಕೆ ಢಿಕ್ಕಿ ಹೊಡೆದು ಬಳಿಕ ಲಾರಿಗೆ ಢಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ. ಕೂಡಲೇ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಇಂದು ಮುಂಜಾನೆ ವೇಳೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ಕುಟುಂಬ ಮೂಲಗಳು ತಿಳಿಸಿವೆ.
Follow us on Social media