ಬೆಂಗಳೂರು: ಕಾಂಗ್ರೆಸ್ ಪಕ್ಷ ಚಳವಳಿ ಇದ್ದಂತೆ. ಡಿಕೆ ಶಿವಕುಮಾರ್ ನೇತೃತೃದಲ್ಲಿ ಪಕ್ಷಕ್ಕೆ ಹೊಸ ಚೈತನ್ಯ ಸಿಗಲಿದೆ ಎಂದು ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿನ ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಇದೊಂದು ವಿನೂತನ ಕಾರ್ಯಕ್ರಮ 20 ಲಕ್ಷ ಕಾರ್ಯಕರ್ತರು ಕಾರ್ಯಕ್ರಮ ವೀಕ್ಷಿಸಿದ್ದಾರೆ. ಇದರಿಂದ ರಾಜ್ಯಕ್ಕೆ ವಿಶಿಷ್ಟ ಸಂದೇಶ ರವಾನೆಯಾಗಿದೆ.
ಡಿ.ಕೆ ಶಿವಕುಮಾರ್ ತಮ್ಮ ನೇತೃತ್ವದ ಸಂಪುಟದಲ್ಲೂ ಕೆಲಸ ಮಾಡಿದ್ದರು. ಅವರ ನೇತೃತ್ವದಲ್ಲಿ ಪಕ್ಷಕ್ಕೆ ಹೊಸ ಚೈತನ್ಯ ಸಿಗಲಿದೆ. ಇದಕ್ಕಾಗಿ ಎಐಸಿಸಿ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.
ಕೊರೋನಾ ಮಧ್ಯೆ ನಾವೆಲ್ಲರೂ ಜನರ ಮಧ್ಯೆ ಹೋಗಿ ಕೆಲಸ ಮಾಡುತ್ತೇವೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮಾತ್ರ ಹೊರಗೆ ಬಂದಿಲ್ಲ. ಇಂಥವರಿಂದ ತ್ಯಾಗ, ಬಲಿದಾನ ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.
Follow us on Social media