ಹೊಸಪೇಟೆ: ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಗುರಿ ಹೊಂದಿದೆ. ಯಡಿಯೂರಪ್ಪ ರೈತ ಬಂಧುವಾಗಿ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಬೆಳೆದಿದೆ, ಬೆಳಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಹೊಸ ಪೇಟೆಯ ಸಂಕಲ್ಪ ಸಭೆಯು ಅಸೆಂಬ್ಲಿ ಚುನಾವಣೆಯಲ್ಲಿ ವಿಜಯವನ್ನು ತಂದುಕೊಡಲಿದೆ. ಕರ್ನಾಟಕದ ಮುಂದಿನ ಗೆಲುವು ದಕ್ಷಿಣ ಭಾರತಕ್ಕೆ ಒಂದು ಸಂದೇಶ ನೀಡಲಿದೆ ಎಂದರು.
ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕರ್ನಾಟಕ ಸ್ವಾಭಿಮಾನಿ ಕರ್ನಾಟಕವಾಗಿ ಪರಿವರ್ತನೆ ಹೊಂದುತ್ತಿದೆ. ರೈತ ವಿಧ್ಯಾ ನಿಧಿ ಪರಿಕಲ್ಪನೆ ಜಾರಿಯಾಗಿದೆ. ವಿವಿಧ ಮಾಸಾಶನ ಹೆಚ್ಚಳ ಮಮಾಡಲಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂದರ್ಭದಲ್ಲಿ ವಿಶೇಷ ಯೋಜನೆಗಳು ಜಾರಿಗೊಳ್ಳುತ್ತಿವೆ ಎಂದು ಅವರು ಮೆಚ್ಚುಗೆ ಸೂಚಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಭಿವೃದ್ಧಿ ಹೆಸರಿನಲ್ಲೇ ಚುನಾವಣೆ ಎದುರಿಸುತ್ತೇವೆ. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಅಭಿವೃದ್ಧಿ ಕಾಮಗಾರಿಗಳನ್ನು ಜನರ ಮುಂದಿಡಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
Follow us on Social media