ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಒಂದೇ ದಿನ ದಾಖಲೆಯ 138 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು 7 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು ಹೊಸದಾಗಿ 337 ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8,281ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 10 ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ 124ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಪತ್ತೆಯಾಗಿರುವ 8,281 ಪ್ರಕರಣಗಳ ಪೈಕಿ 5,210 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನು 2943 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 337 ಸೋಂಕಿತರ ಪೈಕಿ 93 ಜನ ಅಂತಾರಾಜ್ಯ ಮತ್ತು 11 ಮಂದಿ ಅಂತಾರಾಷ್ಟ್ರೀಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.
ಬೆಂಗಳೂರು ನಗರದಲ್ಲಿ 138, ಕಲಬುರಗಿಯಲ್ಲಿ 52, ಬಳ್ಳಾರಿಯಲ್ಲಿ 37, ಹಾಸನದಲ್ಲಿ 18, ದಕ್ಷಿಣ ಕನ್ನಡದಲ್ಲಿ 13, ದಾವಣಗೆರೆಯಲ್ಲಿ 12, ಉಡುಪಿಯಲ್ಲಿ 11, ಬೀದರ್ ನಲ್ಲಿ 10, ಮೈಸೂರು, ಕೊಪ್ಪಳದಲ್ಲಿ ತಲಾ 6, ಯಾದಗಿರಿ, ಕೋಲಾರ, ಬೆಂಗಳೂರು ಗ್ರಾಮಾಂತರದಲ್ಲಿ ತಲಾ 4, ಮಂಡ್ಯ, ಧಾರವಾಡ,ಚಿಕ್ಕಬಳ್ಳಾಪುರ, ಬಾಗಲಕೋಟೆ, ರಾಮನಗರದಲ್ಲಿ ತಲಾ 3, ಚಿಕ್ಕಮಗಳೂರು, ತುಮಕೂರಿನಲ್ಲಿ 2, ಬೆಳಗಾವಿ, ಉತ್ತರಕನ್ನಡ, ಶಿವಮೊಗ್ಗದಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ.
ಬೆಂಗಳೂರು ನಗರವೊಂದರಲ್ಲೇ ಏಳು ಮಂದಿ ಮೃತಪಟ್ಟಿದ್ದಾರೆ. 65 ವರ್ಷದ ಮಹಿಳೆ, 78 ವರ್ಷದ ವ್ಯಕ್ತಿ, 72,58,50,54,69 ವರ್ಷದ ವ್ಯಕ್ತಿ ಕೊನೆಯುಸಿರೆಳೆದಿದ್ದಾರೆ. ವಿಜಯಪುರದ 66 ವರ್ಷದ ಮಹಿಳೆ, ಬೀದರ್ ನ 45 ಮತ್ತು 70 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ.
Follow us on Social media