ಬೆಂಗಳೂರು: ಬೆಂಗಳೂರಿನಲ್ಲಿ ಮಹಾಮಾರಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಹಾಟ್ ಸ್ಪಾಟ್ ಪ್ರದೇಶಗಳನ್ನು ಸೀಲ್ ಡೌನ್ ಮಾಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಆದೇಶಿಸಿದ್ದಾರೆ.
ಬೆಂಗಳೂರಿನ ಕೆಆರ್ ಮಾರುಕಟ್ಟೆ, ಕಲಾಸಿಪಾಳ್ಯ, ಚಿಕ್ಕಪೇಟೆ ಮತ್ತು ಚಾಮರಾಜಪೇಟೆ ಏರಿಯಾಗಳನ್ನು ಜೂನ್ 30ರವರೆಗೆ ಸೀಲ್ ಡೌನ್ ಮಾಡಲು ಬಿಬಿಎಂಪಿ ಮುಂದಾಗಿದೆ.
ಮಾರುಕಟ್ಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅತೀ ಹೆಚ್ಚು ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಈ ಏರಿಯಾಗಳನ್ನು ಸೀಲ್ ಡೌನ್ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ಬೆಂಗಳೂರಿನ ಎಸ್.ಪಿ ರಸ್ತೆಯಲ್ಲಿ ಒಂದೇ ದಿನ 12 ಜನರಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಡೀ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ವಾಹನ ಸಂಚಾರಕ್ಕೆ ಸಂಪೂರ್ಣ ಬ್ರೇಕ್ ಹಾಕಲಾಗಿದ್ದು ಪೊಲೀಸರ ನಿಯೋಜನೆ ಮಾಡಲಾಗಿದೆ ಮುಂಜಾಗ್ರತಾ ಕ್ರಮವಾಗಿ ಹಲವು ಅಂಗಡಿಗಳು ಬಂದ್ ಮಾಡಲಾಗಿದೆ ಧರ್ಮರಾಯಸ್ವಾಮಿ ದೇವಸ್ಥಾನದ ರಸ್ತೆಯೂ ಕೂಡ ಬಂದ್ ಆಗಿದೆ.
Follow us on Social media