ಬೆಂಗಳೂರು : ಇಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಜನರಿಗೆ ಸಿಹಿಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ ನಾಳೆಯಿಂದ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದ್ದು, ಒಟ್ಟು7 ಲಕ್ಷ ಕೋಟಿ ರೂ.ಬಂಡವಾಳ ಹರಿದುಬರಲಿದೆ. ಇದರಿಂದ ಅಂದಾಜು 3 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಸಿಎಂ ಹೇಳಿದ್ದಾರೆ.
- ಬೆಂಗಳೂರಿನ ಅರಮನೆ ಮೈದಾನದ ಆವರಣದಲ್ಲಿ ನಾಳೆ ಆರಂಭವಾಗುವ ಇನ್ವೆಸ್ಟ್ ಕರ್ನಾಟಕ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳ ಪರಿಶೀಲನೆ ನಡೆಸಿದ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.ಇನ್ವೆಸ್ಟ್ ಕರ್ನಾಟಕ ಇಡೀ ಜಗತ್ತಿನ ಗಮನವನ್ನು ಸೆಳೆಯಲಿದೆ. ಜಗತ್ತಿನ ಹೂಡಿಕೆಯೂ ಇಲ್ಲಿಗೆ ಬರುತ್ತಿದೆ. ಕರ್ನಾಟಕದಲ್ಲಿ ಒಳ್ಳೆಯ ವಾತಾವರಣ ಇದೆ. ಮುಂದಿನ 5 ವರ್ಷಗಳ ಬೆಳವಣಿಗೆಗೆ ಒಂದು ಭದ್ರ ಬುನಾದಿಯನ್ನು ಹಾಕಲಿದೆ. ಇದೊಂದು ಬಹಳ ಮಹತ್ವದ ಸಮ್ಮೇಳನ. 5 ಲಕ್ಷ ಕೋಟಿಗಿಂತ ಹೆಚ್ಚಿನ ಬಂಡವಾಳ ಹೂಡಿಕೆ ನಿರೀಕ್ಷೆ ಇದೆ. ಈ ಪೈಕಿ ಈಗಾಗಲೇ 2.8. ಲಕ್ಷ ಕೋಟಿ ಬಂಡವಾಳ ಹೂಡಿಕೆಗೆ ರಾಜ್ಯ ಉನ್ನತ ಮಟ್ಟದ ಸಮಿತಿಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ 10.30ಕ್ಕೆ ವರ್ಚುವಲ್ ಆಗಿ ಈ ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ.